Monday, April 21, 2025
Google search engine

Homeಅಪರಾಧಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 04/2004 ಕಲಂ 147, 148, 504, 447, 427, 435, 324, 326, 307, 506 ಆರ್/ಡಬ್ಲ್ಯು 149 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾದ  ಮುಹಮ್ಮದ್ ಸಮೀವುಲ್ಲಾ ಹಾಗೂ ಇಬ್ರಾಹಿಂ ಎಂಬುವವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.

ಅವರುಗಳನ್ನು ಪಿಎಸ್’ಐ ಮೂರ್ತಿ ಹಾಗೂ ಸಿಬ್ಬಂದಿಗಳಾದ ಕೃಷ್ಣ, ಯೋಗೇಶ್ ಡಿ ಎಲ್, ಪುನೀತ್ ಅವರ ತಂಡ ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ  ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular