Monday, April 21, 2025
Google search engine

Homeರಾಜ್ಯಪ್ರತಿಭಟನೆಯಲ್ಲಿ ಜೈಶ್ರೀರಾಮ್ ಘೋಷಣೆ ಕೂಗಲು ಪ್ರಚೋದನೆ: ಶಾಸಕ ವೇದವ್ಯಾಸ ಕಾಮತ್ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ

ಪ್ರತಿಭಟನೆಯಲ್ಲಿ ಜೈಶ್ರೀರಾಮ್ ಘೋಷಣೆ ಕೂಗಲು ಪ್ರಚೋದನೆ: ಶಾಸಕ ವೇದವ್ಯಾಸ ಕಾಮತ್ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಸೈಂಟ್ ಜೆರೋಸಾ ಶಾಲೆಯ ಶಿಕ್ಷಕಿ ಧರ್ಮನಿಂದನೆ ಮಾಡಿದ್ದರೆಂದು ಆರೋಪಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ವಿದ್ಯಾರ್ಥಿಗಳನ್ನು ಜೈಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಪ್ರಚೋದನೆ ನೀಡಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಪ್ರಕಟಣೆಯಲ್ಲಿ ಹೇಳಿಕೆ ನೀಡಿರುವ ಡಿವೈಎಫ್ ಐ ಕರ್ನಾಟಕದ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಶಿಕ್ಷಕಿ, ಹಿಂದೂ ಧರ್ಮ ನಿಂದನೆ ಮಾಡಿದ್ದರೆ ಅದರ ಮೇಲೆ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಕ್ರಮ, ನಿಯಮಗಳಿವೆ. ಆ ಪ್ರಕಾರ ತನಿಖೆ ನಡೆದು ಅಪರಾಧ ಸಾಬೀತಾದರೆ ಶಿಕ್ಷೆ ವಿಧಿಸುವುದು ಸರಿಯಾದ ವಿಧಾನ. “ಬೀದಿ ನ್ಯಾಯ” ವಿಧಿಸಲು ಇದು ಅರಾಜಕ ದೇಶ ಅಲ್ಲ, ಸರ್ವಾಧಿಕಾರಿಗಳ ನಾಡೂ ಅಲ್ಲ. ಶಾಸಕರಾದವರಿಗೆ ಈ ಜ್ಞಾನ ಇರಬೇಕು. ಶಾಸಕ ವೇದವ್ಯಾಸ ಕಾಮತ್ ಇದನ್ನೆಲ್ಲ ಧಿಕ್ಕರಿಸಿ ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ ಮೆರೆದಿರುವುದು ಆಘಾತಕಾರಿ. ಅದರಲ್ಲೂ ಪ್ರಾಥಮಿಕ ಶಾಲೆಯ ಮುಗ್ಧ ವಿದ್ಯಾರ್ಥಿಗಳನ್ನು ತಮ್ಮದೇ ಶಾಲೆಯ ವಿರುದ್ದ ಮುತ್ತಿಗೆಗೆ ಬಳಸಿರುವುದು, ಧಾರ್ಮಿಕ ಘೋಷಣೆಗಳನ್ನು ಕೂಗಿಸಿರುವುದು ನಾಚಿಕೆಗೇಡಿನ ಕೃತ್ಯ. ಶಾಸಕನಿಗಿರಬೇಕಾದ ಕನಿಷ್ಟ ಪ್ರಜ್ಞೆ, ಸಮಾಜದ ಭವಿಷ್ಯದ ಕುರಿತು ಕಾಳಜಿ ವೇದವ್ಯಾಸ ಕಾಮತರಿಗೆ ಇಲ್ಲ ಎಂಬುದು ಇಂದಿನ ಘಟನೆಯಿಂದ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.

ಇತ್ತ ಎಸ್ ಪಿಡಿಐ ಮುಖಂಡರಾದ ರಿಯಾಝ್ ಫರಂಗಿಪೇಟೆ ಹಾಗೂ ಅನ್ವರ್ ಸಾದಾತ್ ಬಜತ್ತೂರು ಕೂಡಾ ಶಾಸಕ ವೇದವ್ಯಾಸ ಕಾಮತ್ ರ ನಡೆಯನ್ನು ಟೀಕಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಸಿಪಿಐ ಪಕ್ಷದ ಮುಖಂಡ ಸಂತೋಷ್ ಬಜಾಲ್ ಅವರು ಕೂಡಾ ಪ್ರಕಟಣೆಯಲ್ಲಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರಾದ ವೇದವ್ಯಾಸ ಕಾಮತರು ಸರಕಾರಿ ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಅದೇ ಶಾಲಾ ಮಕ್ಕಳನ್ನು ಮತ್ತು ಪೋಷಕರನ್ನು ಸೇರಿಸಿ ಶಾಲಾ ಮುಂಭಾಗ ಘೋಷಣೆಯನ್ನು ಕೂಗಿದ್ದಾರೆ ಎಂದು ಆರೋಪಿಸಿದೆ.

ಅಲ್ಲದೇ ಇದೊಂದು ಗೂಂಡಾಗಿರಿ ಎಂದಿದ್ದು ಇದನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಖಂಡಿಸುತ್ತದೆ ಮತ್ತು ಶಾಸಕರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ.

RELATED ARTICLES
- Advertisment -
Google search engine

Most Popular