Tuesday, April 22, 2025
Google search engine

Homeರಾಜ್ಯರಾಜ್ಯ ಸರ್ಕಾರ ಸುಳ್ಳು ಹೇಳುವ ಕ್ಯಾಂಪೇನ್ ಶುರು ಮಾಡಿದೆ: ಪ್ರಲ್ಹಾದ್ ಜೋಶಿ

ರಾಜ್ಯ ಸರ್ಕಾರ ಸುಳ್ಳು ಹೇಳುವ ಕ್ಯಾಂಪೇನ್ ಶುರು ಮಾಡಿದೆ: ಪ್ರಲ್ಹಾದ್ ಜೋಶಿ

ಬೆಂಗಳೂರು: ರಾಜ್ಯ ಸರ್ಕಾರ ಸುಳ್ಳು ಹೇಳುವಂತಹ ಕ್ಯಾಂಪೇನ್ ಶುರು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳುರಾಮಯ್ಯ ಎಂದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಜಿಎಸ್​​ ಟಿ ಹಂಚಿಕೆಯಲ್ಲಿ ಕಡಿಮೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ ಜೋಶಿ, ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಗೂಬೆ ಕೂರಿಸಲು ಯತ್ನ ಮಾಡಲಾಗುತ್ತಿದೆ ಎಂದರು.

ಎರಡು ಕಾರಣಗಳಿಗಾಗಿ ಸುಳ್ಳು ಹೇಳುತ್ತಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸಲು ಆಗದೇ ಸುಳ್ಳು ಹೇಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಜಗಳ ಡೈವರ್ಟ್ ಮಾಡಲು ಹೋರಾಟ ಮಾಡುತ್ತೇವೆ ಅಂತ ಹೇಳಿ ಡ್ರಾಮಾ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸುಳ್ಳು ಹೇಳುವಂತಹ ಕ್ಯಾಂಪೇನ್ ಶುರು ಮಾಡಿದೆ. ತಮ್ಮ ಕೈಯಲ್ಲಿ ಆಗದೇ ಇರುವುದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿ‌ ಹಲವು ಶಾಸಕರು ಅಭಿವೃದ್ಧಿಗೆ ಹಣ ಇಲ್ಲ ಅಂತ ಹೇಳಿರುವುದೇ ಇದಕ್ಕೆ ಸಾಕ್ಷಿ. ಕ್ಲಾರಿಟಿ ಇಲ್ಲದೇ ಚುನಾವಣೆ ಪೂರ್ವದಲ್ಲಿ ಘೋಷಣೆಗಳನ್ನು ಮಾಡಿದ್ದರು. ಅಧಿಕಾರಕ್ಕೆ ಬಂದ ನಂತರ ತಮ್ಮ ವೈಫಲ್ಯ ಮುಚ್ಚಿಕೊಳ್ಳಲಿಕ್ಕೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿ ಅನುದಾನ ಬಿಡುಗಡೆಯಾದ ಬಗ್ಗೆ ಅಂಕಿ ಅಂಶ ನೀಡಿದರು.

2004 ರಿಂದ 2014ರ ವರೆಗೆ ಕಾಂಗ್ರೆಸ್​ ನೇತೃತ್ವದ ಅಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ರೂ. ಅನುದಾನ ನೀಡಲಾಗಿತ್ತು. ಆದರೆ, ಮೋದಿ ನೇತೃತ್ವದ ಸರ್ಕಾರವು ಕಳೆದ 10 ವರ್ಷಗಳಲ್ಲಿ 2.36 ಲಕ್ಷ ಕೋಟಿ ಅನುದಾನ ನೀಡಿದೆ. ಯುಪಿಎ ಅವಧಿಗೆ ಹೋಲಿಕೆ ಮಾಡಿದರೆ ಬಿಜೆಪಿ ಸರ್ಕಾರ ಶೇ.243 ರಷ್ಟು ಹೆಚ್ಚು ಅನುದಾನ ಕೊಟ್ಟಿದೆ ಎಂದರು.

ಎನ್​ ಡಿಆರ್​ ಎಫ್ ಅಡಿ ನಾಲ್ಕು ಪಟ್ಟು ಹೆಚ್ಚು ಹಣ ರಾಜ್ಯಕ್ಕೆ ಕೊಟ್ಟಿದ್ದೇವೆ ಎಂದು ಹೇಳಿದ ಜೋಶಿ, 2004 ರಿಂದ 2014ರ ವರೆಗೆ ಯುಪಿಎ ಕಾಲದಲ್ಲಿ ರಾಜ್ಯಕ್ಕೆ 3,655 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಆದರೆ ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರ 12,542 ಕೋಟಿ ರೂಪಾಯಿ ಕೊಟ್ಟಿದೆ ಎಂದರು.

ತೆರಿಗೆಯ ಪಾಲು 2004 ರಿಂದ 2014 ರ ವರೆಗೆ ಯುಪಿಎ ಕಾಲದಲ್ಲಿ ರಾಜ್ಯಕ್ಕೆ 81 ಸಾವಿರ ಕೋಟಿ ರೂ. ಅನುದಾನ ನೀಡಲಾಗಿತ್ತು. ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರ 2.85 ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ. ಯುಪಿಎಗೆ ಹೋಲಿಕೆ ಮಾಡಿದರೆ ಶೇ.250 ರಷ್ಟು ಹೆಚ್ಚು ಅನುದಾನ ನಾವು ಕೊಟ್ಟಿದ್ದೇವೆ ಎಂದರು. ಜಿಎಸ್​ಟಿ ಹಣವನ್ನು ಒಂದು ಪೈಸೆಯೂ ಬಾಕಿ ಇರಿಸಿಲ್ಲ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಅನುದಾನ ಕೊಟ್ಟಿದೆ ಎಂದರು.

RELATED ARTICLES
- Advertisment -
Google search engine

Most Popular