ವರದಿ: ಎಡತೊರೆ ಮಹೇಶ್
ಎಚ್ ಡಿ ಕೋಟೆ: ಎಚ್ ಡಿ ಕೋಟೆ ತಾಲೂಕಿಗೆ ಫೆಬ್ರವರಿ 15 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಜಿಬಿ ಸರಗೂರಿಗೆ ಆಗಮಿಸುವ ಸಂವಿಧಾನ ರಥಯಾತ್ರೆಯನ್ನು ಶಾಸಕರಾದ ಅನಿಲ್ ಚಿಕ್ಕಮಾದು ರವರು ಮತ್ತು ಜನಪ್ರತಿನಿಧಿಗಳು ಅಧಿಕಾರಿ ವರ್ಗದವರು ಬರ ಮಾಡಿಕೊಳ್ಳಲಿದ್ದಾರೆ.
ಇಂದು ಪೂರ್ವಭಾವಿ ಸಭೆಯನ್ನು ತಾಲೂಕು ದಂಡ ಅಧಿಕಾರಿಗಳಾದ ಶ್ರೀನಿವಾಸ್ ರವರು ಅಧಿಕಾರಿಗಳ ಸಭೆ ನಡೆಸಿದರು
ಎಚ್ ಡಿ ಕೋಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶ್ರೀನಿವಾಸ್ ರವರು, ರಥಯಾತ್ರೆ ಆಗಮಿಸುತ್ತಿರುವ ಹಿನ್ನೆಲೆ ಅದ್ದೂರಿಯಾಗಿ ಬರಮಾಡಿಕೊಳ್ಳಬೇಕು ಪ್ರತಿಯೊಂದು ಇಲಾಖೆಯ ಅಧಿಕಾರಿ ವರ್ಗ ಹಾಜರಿರಬೇಕು ರಥಯಾತ್ರೆ ಆಗಮಿಸುವ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಗಂಟೆಗಳ ಕಾಲ ಸಂವಿಧಾನದ ಪೀಠಿಕೆಯ ಬಗ್ಗೆ ಅರಿವು ಮೂಡಿಸಲಾಗುವುದು. ಸ್ತ್ರೀ ಶಕ್ತಿ ಮಹಿಳಾ ಸಂಘದವರಿಂದ ಪೂರ್ಣ ಕುಂಭ ಮತ್ತು ಮಂಗಳವಾದ್ಯ ವಿದ್ಯಾರ್ಥಿಗಳಿಂದ ಮೆರವಣಿಗೆ ಪ್ರತಿ ಗ್ರಾಮ ಪಂಚಾಯಿತಿಯ ಎಲ್ಲಾ ವರ್ಗದ ಗ್ರಾಮದ ಯಜಮಾನರು ಮುಖಂಡರುಗಳು ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಎಲ್ಲ ಇಲಾಖೆಯ ಅಧಿಕಾರಿ ವರ್ಗದವರು ಶಿಕ್ಷಕ ವೃಂದದವರು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯಿತಿಯ ಪಿಡಿಒ ಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲೂಕು ಪಂಚಾಯಿತಿ EO ಧರಣೇಶ್ ಮಾತನಾಡಿ ನಮ್ಮ ತಾಲೂಕಿಗೆ ಸಂಬಂಧಪಟ್ಟ 29 ಗ್ರಾಮ ಪಂಚಾಯಿತಿಯಲ್ಲೂ ಕೂಡ ರಥಯಾತ್ರೆಯನ್ನು ಸ್ವಾಗತಿಸಲು ಪೂರ್ವ ಸಿದ್ಧತೆ ಮಾಡಿಕೊಂಡಿದ್ದು ಹಬ್ಬದ ರೀತಿಯಲ್ಲಿ ಈ ಒಂದು ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ತಾಸಿಲ್ದಾರ್ ಶ್ರೀನಿವಾಸ್ EO ಧರಣೇಶ್ ಆದಿ ಮಹಾಸಭಾ ತಾಲೂಕು ಅಧ್ಯಕ್ಷರಾದ ಹೆಚ್ ಸಿ ನರಸಿಂಹಮೂರ್ತಿ ಕೋಟೆಬೆಟ್ಟಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಶಬೀರ್ ಹುಸೇನ್, ಪುರಸಭೆ ಮುಖ್ಯ ಅಧಿಕಾರಿ ಸುರೇಶ್, ತಾಲೂಕು ಆರೋಗ್ಯ ಅಧಿಕಾರಿ ರವಿಕುಮಾರ್, CDPOಆಶಾ,ಇಂಜಿನಿಯರ್ ನಾಗರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು