Saturday, April 19, 2025
Google search engine

Homeರಾಜ್ಯರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು: ಸಚಿವ ಪ್ರಹ್ಲಾದ ಜೋಶಿ

ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ. ಅನುಮತಿ ಪಡೆಯದೆ ಬರುವವರನ್ನು ತಡೆಯಲಾಗುತ್ತಿದೆ. ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು. ಅವರೊಂದಿಗೆ ನಾವು ಸಹಾನುಭೂತಿಯಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆ‌ ಈಡೇರಿಸಲು ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ. ಈಗಾಗಲೇ ಕೃಷಿ ಸಚಿವ ಮುಂಡಾ ಅವರು ರೈತರ ಸಂಘಟನೆ ಜೊತೆ ಮಾತನಾಡಿದ್ದಾರೆ. ರೈತರು ಹೊಸ ಬೇಡಿಕೆ ಇಟ್ಟಿದ್ದು, ನಮ್ಮ ಸರ್ಕಾರ ಸಹಾನಭೂತಿಯಿಂದ ಆ ಬಗ್ಗೆ ಪರಿಶೀಲಿಸುತ್ತಿದೆ ಎಂದರು.

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಈ ಬಾರಿಯು ನನ್ನ ಗೆಲುವು ಖಚಿತ. ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈಗ ಮಾತನಾಡುವುದು ಕೇವಲ ಉಹಾಪೋಹ ಅಷ್ಟೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಎಲ್ಲವೂ ಅಂತಿಮವಾಗಲಿದೆ. ಒಂದು ಹಂತದಲ್ಲಿ ಕೇಂದ್ರದಲ್ಲಿ ಚರ್ಚೆ ನಡೆಯುತ್ತಿತದೆ. ಅದೆಲ್ಲವೂ ಅಪೂರ್ಣ ಆಗಿದೆ. ಕಾರ್ಯಕಾರಿಣಿ ನಂತರವೇ ಎಲ್ಲವೂ ಅಂತಿಮವಾಗಲಿದೆ ಎಂದರು.

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಅವರೊಬ್ಬ ಸಿದ್ದರಾಮಯ್ಯ ಅಲ್ಲ ಸುಳ್ಳು ರಾಮಯ್ಯ ಎಂದು ಕುಟುಕಿದರು.

ಅವರು ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ನಾವು ಒಂದೇ ಒಂದು ರೂಪಾಯಿ ಜಿಎಸ್‌ಟಿ ಹಣ ಕೊಡುವುದು ಬಾಕಿ ಇಲ್ಲ ಎಂದರು.

RELATED ARTICLES
- Advertisment -
Google search engine

Most Popular