Monday, April 21, 2025
Google search engine

Homeರಾಜ್ಯವೇದವ್ಯಾಸ ಕಾಮತ್, ಭರತ್ ಶೆಟ್ಟಿ ಅವರನ್ನು ಶಾಸಕ ಹುದ್ದೆಯಿಂದ ವಜಾಗೊಳಿಸುವಂತೆ ಸಿಎಂ, ಸ್ಪೀಕರ್ ಗೆ ದೂರು ಸಲ್ಲಿಕೆ:...

ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಅವರನ್ನು ಶಾಸಕ ಹುದ್ದೆಯಿಂದ ವಜಾಗೊಳಿಸುವಂತೆ ಸಿಎಂ, ಸ್ಪೀಕರ್ ಗೆ ದೂರು ಸಲ್ಲಿಕೆ: ಮಾಜಿ ಎಂ.ಎಲ್ಸಿ ಐವನ್ ಡಿಸೋಜಾ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಶಾಸಕ ಸ್ಥಾನಕ್ಕೆ ಕುತ್ತು ಬರುತ್ತಾ..? ಹೀಗೊಂದು ಪ್ರಶ್ನೆ ಎದುರಾಗಿದೆ‌.

ಹೌದು.  ಮಂಗಳೂರು ನಗರದ ಖಾಸಗಿ ಶಾಲೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಅವರು ವಿಚಾರಣೆ ಮಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದರ ಬದಲು ಅನುಚಿತವಾಗಿ ವರ್ತಿಸಿದ್ದಾರೆ. ಶಾಸಕರಾಗಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಶಾಸಕ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ  ಹಾಗೂ ವಿಧಾನಸಭಾ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಎಂ.ಎಲ್ಸಿ ಐವನ್ ಡಿಸೋಜಾ ತಿಳಿಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿ ಶಿಕ್ಷಕಿಯಿಂದ ಏನಾದರೂ ತಪ್ಪಾಗಿದ್ದರೆ ಆ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಿ ಬಳಿಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಅವಕಾಶ ಇತ್ತು. ಆದರೆ ವಿದ್ಯಾರ್ಥಿಗಳನ್ನು ಸೇರಿಸಿ ಶಾಲೆಯ ಆವರಣದಲ್ಲಿ ಶಿಕ್ಷಕರನ್ನು ಅವಮಾನಗೊಳಿಸಿ ನಿಂದಿಸಿರುವುದು, ಕೋಮುದ್ವೇಷದ ಹೇಳಿಕೆ ನೀಡಿರುವುದು ಖಂಡನೀಯ. ಶಾಸಕರ ಈ ವರ್ತನೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular