Sunday, April 20, 2025
Google search engine

Homeರಾಜಕೀಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರೇ ಮನೆಗೆ ಕಳುಹಿಸಲು ತೀರ್ಮಾನಿಸಿದ್ದಾರೆ: ಎ. ಮುನಿಸ್ವಾಮಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರೇ ಮನೆಗೆ ಕಳುಹಿಸಲು ತೀರ್ಮಾನಿಸಿದ್ದಾರೆ: ಎ. ಮುನಿಸ್ವಾಮಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಈಗ ನಿವೃತ್ತಿ ಸಮಯವಾಗಿದ್ದು, ಜನರೇ ಅವರನ್ನು ಮನೆಗೆ ಕಳುಹಿಸಲು ತಿರ್ಮಾನಿಸಿದ್ದಾರೆ ಎಂದು ಸಂಸದ ಎ. ಮುನಿಸ್ವಾಮಿ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಡ್ರಾಮಾ ಕಂಪನಿ ತಂಡ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ದೆಹಲಿಗೆ ತೆರಳಿದ್ದರು. ಆದರೆ, ಪ್ರಧಾನಮಂತ್ರಿ ಮೋದಿ ಅವರು ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ಅನುದಾನ ಹಂಚಿಕೆ ವಿಷಯದಲ್ಲಿ ಸಿದ್ದರಾಮಯ್ಯ ಸುಮ್ಮನೆ ಕೇಂದ್ರದ ಮೇಲೆ ಗೂಬೆ ಕೂರಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

ಕಾಂಗ್ರೆಸ್ ನವರ ಗ್ಯಾರಂಟಿಗಳಿಗೆ ವಾರಂಟಿ ಇಲ್ಲ. ಅವುಗಳು ಅಳುವಿನಂಚಿನಲ್ಲಿವೆ. ಹೀಗಾಗಿ ಇನ್ನಿಲ್ಲದ ಗಿಮಿಕ್ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ಮನೆಗೆ ನೀರು ಬಾರದಿದ್ದರೂ ಮೋದಿಯತ್ತ ಬೊಟ್ಟು ಮಾಡುತ್ತಾರೆ. ಒಂದೇ ಸಮುದಾಯಕ್ಕೆ ಹತ್ತು ಕೋಟಿ ರೂ. ಅನುದಾನ ನೀಡುವ ಮೂಲಕ ದೇಶ ಇಬ್ಭಾಗಿಸುವ ಕಾರ್ಯ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ. ಇದೇ ಉದ್ದೇಶದಿಂದ ಸಂಸದ ಡಿ.ಕೆ. ಸುರೇಶ ದಕ್ಷಿಣ ಭಾರತದ ಹೇಳಿಕೆ‌ ನೀಡಿದ್ದಾರೆ ಎಂದರು.

ಶೇ. 5ರಷ್ಟು ಜನರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ತಲುಪಿವೆ. ಈ ನಿಟ್ಟಿನಲ್ಲಿ ಚುನಾವಣೆ ಬರಲಿ, ಸಿದ್ದರಾಮಯ್ಯ ನಮ್ಮ ಮನೆಗೆ ಬರಲಿ ಆಗ ತಕ್ಕ ಉತ್ತರ ಕೊಡುತ್ತೇವೆ ಎಂದು ಜನರು ಕಾಯುತ್ತಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular