Monday, April 21, 2025
Google search engine

Homeರಾಜ್ಯಜೆರೋಸಾ ಶಾಲಾ ಪ್ರಕರಣ: ಇಬ್ಬರು ಬಿಜೆಪಿ ಶಾಸಕರು, ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲು

ಜೆರೋಸಾ ಶಾಲಾ ಪ್ರಕರಣ: ಇಬ್ಬರು ಬಿಜೆಪಿ ಶಾಸಕರು, ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕರು ಹಾಗೂ ಇಬ್ಬರು ಕಾರ್ಪೊರೇಟರ್‌ ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯ ಶಿಕ್ಷಕಿ‌ಯೊಬ್ಬರು‌ ಹಿಂದೂ ಧರ್ಮ ಮತ್ತು ದೇವರನ್ನು ಅವಹೇಳಿಸಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಗಳ ಹೆತ್ತವರು ಎನ್ನಲಾದ ಕೆಲವು ಮಂದಿ ಸಂಘ ಪರಿವಾರದ ಕಾರ್ಯಕರ್ತರ ಜೊತೆಗೂಡಿ ಶಾಲೆಯ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಿದ್ದರು ಎಂದು ಹೇಳಲಾಗಿತ್ತು.

ಕೆ ಪಿ ಸಿ ಸಿ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕ ಐವನ್ ಡಿಸೋಜಾ ಹಾಗೂ ಮಾಜಿ ಶಾಸಕ ಜೆ ಆರ್ ಲೋಬೋ ಮತ್ತು ಇತರ ನಾಯಕರೊಂದಿಗೆ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್ ,ಭರತ್ ಶೆಟ್ಟಿ ಮತ್ತು ಇತರರ ವಿರುದ್ಧ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರ ದಲ್ಲಿ FIR ದಾಖಲು ಮಾಡಲಾಯಿತು.

RELATED ARTICLES
- Advertisment -
Google search engine

Most Popular