Tuesday, April 22, 2025
Google search engine

HomeUncategorizedಜೆಡಿಎಸ್​ ವರಿಷ್ಠ ಎಚ್​ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಜೆಡಿಎಸ್​ ವರಿಷ್ಠ ಎಚ್​ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಎಚ್‌ ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು.

RELATED ARTICLES
- Advertisment -
Google search engine

Most Popular