ಬಳ್ಳಾರಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆ.17 ರಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದ್ದಾರೆ.
12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ ಜಗಜ್ಯೋತಿ ಬಸವಣ್ಣನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕøತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಶ್ರೀ ಜಗಜ್ಯೋತಿ ಬಸವಣ್ಣನವರನ್ನು ರಾಜ್ಯ ಸರ್ಕಾರವು “ಕರ್ನಾಟಕ ಸಾಂಸ್ಕøತಿಕ ನಾಯಕ” ಎಂದು ಘೋಷಿಸಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ “ಸಾಂಸ್ಕøತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಿ, ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು.
ಜಗಜ್ಯೋತಿ ಬಸವಣ್ಣನವರ ಭಾವಚಿತ್ರದ ಕೆಳಗೆ “ವಿಶ್ವಗುರು ಬಸವಣ್ಣ ಸಾಂಸ್ಕøತಿಕ ನಾಯಕ” ಎಂಬ ಅಡಿಬರಹ ಮುದ್ರಿಸಿ ಅಳವಡಿಸಬೇಕು. ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅಥವಾ ಜಾಲತಾಣ https://kannadasiri.Karnataka.Gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.