ಬೆಂಗಳೂರು: ಇದೀಗ ಅಕ್ಕಿ ರಾಜಕೀಯ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರವನ್ನು ತಪ್ಪಿತಸ್ಥ ಸ್ಥಾನದಲ್ಲಿ ಕಾಂಗ್ರೆಸ್ ನಿಲ್ಲಿಸಲು ಮುಂದಾಗಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು FCI ನಿರಾಕರಣೆ ಹಿನ್ನಲೆ ಕೇಂದ್ರ ಸರ್ಕಾರದ ವಿರುದ್ಧ ನಾಳೆ(ಜೂ.21) ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಮಾಡಲಿದೆ.
ರಾಜ್ಯ ಕಾಂಗ್ರೆಸ್(Congress) ಸರ್ಕಾರ ಚುನಾವಣೆ ವೇಳೆ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಪೂರೈಸಲು ನಾನಾ ಸರ್ಕಸ್ ನಡೆಸುತ್ತಿದೆ. ಸದ್ಯ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ (Gruha Jyothi Scheme) ಜಾರಿಯಾಗಿದೆ. ಜೊತೆಗೆ ಶಕ್ತಿ ಯೋಜನೆ(Shakti Yojana) ಕೂಡ ಭರ್ಜರಿ ಯಶಸ್ಸು ಕಾಣುತ್ತಿದೆ. ಮನೆ ಗೋಜು ಬಿಟ್ಟು ಮಹಿಳಾ ಮಣಿಯರು ಪುಣ್ಯ ಕ್ಷೇತ್ರಗಳಿಗೆ, ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಎಂಜಾಯ್ ಮಾಡುತ್ತಿದ್ದಾರೆ. ಇನ್ನು ಅಕ್ಕಿ ನೀಡಲು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಅನ್ನ ಭಾಗ್ಯ ಯೋಜನೆ ಜಾರಿಗೆ ಕಂಟಕ ಎದುರಾಗಿದೆ. ಹೀಗಾಗಿ ಇಂದು ಕಾಂಗ್ರೆಸ್ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಿದೆ. ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಕಾಂಗ್ರೆಸ್ಗೆ ಪ್ರತಿಯಾಗಿ ಬಿಜೆಪಿಯಿಂದಲೂ ಇಂದು ಪ್ರತಿಭಟನೆ ನಡೆಯಲಿದೆ
ಬೆಂಗಳೂರಿನಲ್ಲಿಂದು ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಮೌರ್ಯ ಸರ್ಕಲ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆ ಎರಡೂ ಕಡೆ 500ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಡಿಸಿಪಿಗಳಾದ ಶ್ರೀನಿವಾಸಗೌಡ, ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 6 ಎಸಿಪಿ, 25 ಪಿಐ ಸೇರಿ 500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಬಿಜೆಪಿ ಮುಖಂಡರ ಪ್ರತಿಭಟನೆ ಸ್ಥಳದಲ್ಲಿ KSRP ತುಕಡಿ ನಿಯೋಜನೆ ಮಾಡಲಾಗಿದೆ.