Monday, April 21, 2025
Google search engine

Homeಅಪರಾಧಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್: ಪತಿ ಆತ್ಮಹತ್ಯೆ

ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್: ಪತಿ ಆತ್ಮಹತ್ಯೆ

ಚಾಮರಾಜನಗರ: ಕರಿಮಣಿ ಮಾಲೀಕ ನೀನಲ್ಲ ಎಂದು ಸೋದರಮಾವನೊಂದಿಗೆ ರೀಲ್ಸ್ ಮಾಡಿ ಅಪ್ ಲೋಡ್ ಮಾಡಿದ ಪತ್ನಿಯ ವರ್ತನೆಗೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ನಡೆದಿದೆ.

ಕುಮಾರ್ (33) ನೇಣಿಗೆ ಶರಣಾದ ವ್ಯಕ್ತಿ.

ಸೋದರ ಮಾವ ಮತ್ತು ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ಪತ್ನಿ ರೂಪಾ ರೀಲ್ಸ್ ಮಾಡಿದ್ದಳು.ಇದನ್ನ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಿದ ಗೆಳೆಯರು ಹಾಗೂ ಸಂಭಂಧಿಕರು ಕುಮಾರ್ ಗಮನಕ್ಕೆ ತಂದಿದ್ದಾರೆ.ರೀಲ್ಸ್ ಡಿಲೀಟ್ ಮಾಡುವಂತೆ ಪತ್ನಿಗೆ ಕುಮಾರ್ ಮನವಿ ಮಾಡಿದ್ದಾನೆ. ಪತಿಯ ಮನವಿಗೆ ರೂಪಾ ಕ್ಯಾರೆ ಎಂದಿಲ್ಲ. ಇದರಿಂದ ಮನನೊಂದ ಪತಿ ಕುಮಾರ್ ಮನೆ ಮುಂದಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular