Sunday, April 20, 2025
Google search engine

Homeಅಪರಾಧಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್!

ಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ೯ ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಫೆಬ್ರವರಿ ೯ರಂದು ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾಗ ಆತನನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ೪೦ ವರ್ಷದ ಪ್ರಯಾಣಿಕನ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತನ ಹೊಟ್ಟೆಯಲ್ಲಿ ಕೊಕೇನ್ ಇರುವುದು ಪತ್ತೆಯಾಗಿದೆ. ನಂತರ ೯೨೦ ಗ್ರಾಂ ಕೊಕೇನ್ ನ ೯೧ ಕ್ಯಾಪ್ಸುಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸಸ್ (ಎನ್‌ಡಿಪಿಎಸ್) ಕಾಯಿದೆ, ೧೯೮೫ರ ಅಡಿಯಲ್ಲಿ ಬಂಧಿಸಲಾಗಿದೆ.

ಕೊಕೇನ್ ಅನ್ನು ದೆಹಲಿಗೆ ತಲುಪಿಸಲು ತೆರಳುವಂತೆ ಆರೋಪಿಗೆ ಸೂಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ೨೦೨೩ರ ಜನವರಿಯಿಂದ ಬೆಂಗಳೂರಿನ ಡಿಆರ್‌ಐಗೆ ಸಿಕ್ಕಿರುವ ಮೂರನೇ ಪ್ರಕರಣ ಇದಾಗಿದೆ. ೨೦೨೩ರ ಡಿಸೆಂಬರ್ ೧೧ರಂದು, ಡಿಆರ್‌ಐ ೨ ಕೆಜಿ ತೂಕದ ೯೯ ಕೊಕೇನ್ ಕ್ಯಾಪ್ಸುಲ್‌ಗಳನ್ನು ನೈಜೀರಿಯನ್ ವ್ಯಕ್ತಿಯಿಂದ ವಶಪಡಿಸಿಕೊಂಡಿತ್ತು. ನಂತರ ೨೦೨೩ರ ಏಪ್ರಿಲ್ ೨೮ರಂದು ಡಿಆರ್‌ಐ ೪೦ ವರ್ಷದ ನೈಜೀರಿಯನ್ ಪ್ರಜೆಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಆತನ ಬಳಿಯಿಂದ ಕ್ಯಾಪ್ಸುಲ್ ರೂಪದಲ್ಲಿ ಸೇವಿಸಿದ್ದ ೧ ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿತ್ತು.

RELATED ARTICLES
- Advertisment -
Google search engine

Most Popular