ಮೈಸೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ದರ್ಶನ ಪಡೆಯಲು ನೂರಾರು ಭಕ್ತರು ಮೈಸೂರಿನಿಂದ ಇಂದು ಭಾನುವಾರ ತೆರಳಿದರು
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಬಾಲರಾಮನ ದರ್ಶನ ಪಡೆಯಬೇಕು ಎನ್ನುವ ಉದ್ದೇಶದೊಂದಿಗೆ ದೇಶಾದ್ಯಂತ ಈಗಾಗಲೇ ಅಯೋಧ್ಯೆ ಶ್ರೀರಾಮ ಮಂದಿರ ದರ್ಶನ ಅಭಿಯಾನ ಆರಂಭವಾಗಿದೆ. ಇದರ ಹಿನ್ನೆಲೆ ಮೈಸೂರಿನ ರೈಲ್ವೆ ನಿಲ್ದಾಣದಿಂದ ಬಾಲರಾಮ ದರ್ಶನಕ್ಕೆ ತೆರಳುವ ರೈಲಿಗೆ ಬಾಲರಾಮ ಮೂರ್ತಿ ನಿರ್ಮಿಸಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರು ಚಾಲನೆ ನೀಡಿದರು.
ಬಾಲರಾಮನ ದರ್ಶನಕ್ಕಾಗಿ ತೆರಳುವ ಭಕ್ತರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅಯೋಧ್ಯೆಯಲ್ಲಿ ವಿಶೇಷ ವಸತಿ ಸೌಕರ್ಯ ಒದಗಿಸಲಾಗಿದೆ. ಈ ಅಭಿಯಾನದ ಮೂಲಕ ಸುಮಾರು ೩೫ ಸಾವಿರ ಜನ ಅಯೋಧ್ಯೆಗೆ ತೆರಳಲಿದ್ದಾರೆ. ಪ್ರಧಾನಿ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಮಾಡಿರುವುದು ೫೦೦ ವರ್ಷಗಳವರೆಗೆ ನಡೆದ ಹೋರಾಟಕ್ಕೆ ಪ್ರತಿಫಲ ಸಿಕ್ಕಂತಾಗಿದೆ ಎಂದು ಹೇಳಿದರು.