Monday, April 21, 2025
Google search engine

Homeರಾಜ್ಯಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ

ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ

ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನರಾಗಿದ್ದಾರೆ.

ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.

ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ ಬೆಳೆಸಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ ಇವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಅವರು ಉಜಿರೆಯಲ್ಲಿ ವಾಸವಾಗಿ ಕೃಷಿಯಲ್ಲಿ ತೊಡಗಿದ್ದರು.

ಕಾದಂಬರಿಗಳು:

ಶಬ್ದಗಳು (1976), ಸೌಮ್ಯ (1978), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣ್ಯೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ, ಮೃತ್ಯೋರ್ಮಾ ಅಮೃತಂ ಗಮಯ, ಯುಗಾಂತರ, ಶಿಲಾತಪಸ್ವಿ, ಸ್ವರ್ಣಮೃಗ, ಅರಗಿನ ಮನೆ ಮುಂತಾದ ಕಾದಂಬರಿಗಳನ್ನು ಬರೆದು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆಯನ್ನು ನೀಡಿದ್ದರು.

RELATED ARTICLES
- Advertisment -
Google search engine

Most Popular