Wednesday, April 23, 2025
Google search engine

Homeರಾಜಕೀಯಮಕ್ಕಳ ಮನಸ್ಸಿನಲ್ಲಿ ಸಂಘರ್ಷ ಉಂಟು ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಮಕ್ಕಳ ಮನಸ್ಸಿನಲ್ಲಿ ಸಂಘರ್ಷ ಉಂಟು ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಬರೆಸಿ ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸರಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಅಂತ ಹೇಳುತ್ತಿದ್ದೇವೆ. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ ಎಂದರು.

ನರೇಂದ್ರ ಮೋದಿ ಸರ್ಕಾರ ಬಡವರಿಗೆ ಅಕ್ಕಿಯನ್ನು ಕೊಡುತ್ತಿದೆ. ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಇದೇ ವೇಳೆ ಬೊಮ್ಮಾಯಿ ದೂರಿದರು.

RELATED ARTICLES
- Advertisment -
Google search engine

Most Popular