ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಾರಿ ಮಾಡಿರುವ ಆರನೇ ಸಮನ್ಸ್‌ಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೈರಾಗಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ಈ ಸಮನ್ಸ್ ಕಾನೂನುಬಾಹಿರ ಎಂಬ ತನ್ನ ನಿಲುವನ್ನು ಪುನರುಚ್ಚರಿಸಿದ್ದು, ಸದ್ಯ ಈ ವಿಷಯ ನ್ಯಾಯಾಲಯದಲ್ಲಿದೆ ಎಂದು ಹೇಳಿದೆ.
ಇಂದು ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷವು, ಜಾರಿ ನಿರ್ದೇಶನಾಲಯವೇ ನ್ಯಾಯಾಲಯದ ಮೆಟ್ಟಿಲೇರಿದೆ. ಈ ವಿಷಯದ ಊರ್ಜಿತತೆ ಕುರಿತು ನ್ಯಾಯಾಲಯ ತನ್ನ ನಿರ್ಧಾರ ಪ್ರಕಟಿಸುವವರೆಗೂ ಜಾರಿ ನಿರ್ದೇಶನಾಲಯವು ಕಾಯಬೇಕು ಎಂದು ತಾನು ಸಲಹೆ ನೀಡುತ್ತೇನೆ ಎಂದು ಹೇಳಿದೆ.