ಧಾರವಾಡ : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಿಗದಿತ ದಿನಗಳಂದು ಬೆಳಗ್ಗೆ 11 ಗಂಟೆಗೆ ಆಲೂರು ವೆಂಕಟರಾವ್ ಭವನದಲ್ಲಿ ಜಯಂತಿ ಆಚರಿಸಲು ನಿರ್ಧರಿಸಲಾಯಿತು. ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ವಚನ ಪಿತಾಮಹ ಫಾ. ಜಿ.ಹಳ್ಳಕಟ್ಟಿಯವರ ಜಯಂತಿಯನ್ನು ಜುಲೈ 2 ರಂದು, ದೇವರ ದಾಸಿಮಯ್ಯ ಜಯಂತಿಯನ್ನು ಜುಲೈ 7 ರಂದು ಆಚರಿಸಲು ನಿರ್ಧರಿಸಲಾಯಿತು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.