Sunday, April 20, 2025
Google search engine

Homeರಾಜ್ಯನಾರಿಮನ್ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಸಂತಾಪ

ನಾರಿಮನ್ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಸಂತಾಪ

ಬೆಂಗಳೂರು: ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ನಾರಿಮನ್ ಅವರು ಈ ದೇಶ ಕಂಡ ಅಪ್ರತಿಮ ನ್ಯಾಯವಾದಿಗಳಲ್ಲಿ ಒಬ್ಬರು. ವೃತ್ತಿಯಲ್ಲಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದ ಅವರು, ಉದಾರ ಮಾನವತಾವಾದಿ ಆಗಿದ್ದರು. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕಾವೇರಿ ನೀರಿನ ಹಕ್ಕಿನ ವಿಚಾರವಾಗಿ ಮಾತನಾಡುವಾಗ ಇದು ಅನುಭವಕ್ಕೆ ಬಂದಿತ್ತು’ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ಕಾವೇರಿ ಜಲ ವಿವಾದ ಭುಗಿಲೆದ್ದಾಗ ನಾರಿಮನ್ ಅವರು ಕರ್ನಾಟಕದ ಹಕ್ಕನ್ನು ಸಮರ್ಥವಾಗಿ ಮಂಡಿಸಿದರು. ಅವರ ವಾದದಿಂದಾಗಿ ರಾಜ್ಯಕ್ಕೆ ಹೆಚ್ಚು ನೀರು ಸಿಕ್ಕಿತು. ನಮ್ಮ ಅಹವಾಲುಗಳನ್ನು ನಾರಿಮನ್ ಅವರು ಸದಾ ಸಹಾನುಭೂತಿಯಿಂದ ಆಲಿಸುತ್ತಿದ್ದರು ಎಂದು ಅವರು ಸ್ಮರಿಸಿದ್ದಾರೆ.

RELATED ARTICLES
- Advertisment -
Google search engine

Most Popular