ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ರೈತರ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶಾಲಾ, ಕಾಲೇಜ್, ಉನ್ನತ ಶಿಕ್ಷಣ, ವೈದ್ಯಕೀಯ ಕಾಲೇಜು ಸೇರಿದಂತೆ ರಾಜ್ಯದೆಲ್ಲೆಡೆ ಪದ್ಮ ಭೂಷಣ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಕೃಪ ಆರ್ಶೀವಾರದೊಂದಿಗೆ ಆರಂಬಿಸಿ ಅತ್ಯುತ್ತಮವಾಗಿ ನಡೆಯುತ್ತಿದೆ ಎಂದು ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇಶ್ಚರನಾಥ ಸ್ವಾಮೀಜಿ ಅವರು ತಿಳಿಸಿದರು.
ಅವರು ಕೆ.ಆರ್.ನಗರ ತಾಲ್ಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ವತಿಯಿಂದ ಬಿ.ಜಿ.ಎಸ್ ಪಬ್ಲಿಕ್ ಶಾಲೆಯ ಎರಡು ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಾಲಾ ಕೊಠಡಿಗಳನ್ನು ಪರಿಶೀಲಿಸಿ ಮಾತನಾಡಿದರು.
ಇದೇ ಪೆಬ್ರವರಿ ೨೪ ಶನಿವಾರದಂದು ಸಂಜೆ ೪ ಗಂಟೆಗೆ ಹೊಸ ಅಗ್ರಹಾರ ಗ್ರಾಮದಲ್ಲಿ ಶ್ರೀ ಆದಿಚುಂಚನಗಿರಿ ಶಿಕಣ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ೧೬ ಶಾಲಾ ಕೊಠಡಿಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದ ಅವರು ಇಂದಿನಿಂದಲೇ ನೂತನ ಕಟ್ಟಡಲ್ಲಿ ಹೋಮ ಹವನಗಳನ್ನು ನಡೆಸಲಾಗುತ್ತಿದೆ.
ಎಂದರಲ್ಲದೆ ನೂತನವಾಗಿ ಪ್ರತಿಷ್ಟಾಪನೆ ಮಾಡಿರುವ ಗಣಪತಿ ದೇವಾಲಯವನ್ನು ಪೂಜಾ ಕೈಂಕರ್ಯಗಳನ್ನು ನೇರವೇರಿಸಿ ಲೋಕಾರ್ಪಣೆ ಮಾಡಿದರು.
ಇದೇ ಪೆಬ್ರವರಿ ೨೪ ಶನಿವಾರದಂದು ನಡೆಯುವ ಲೋಕಾರ್ಪಣೆ ಕಾರ್ಯಮದಲ್ಲಿ ಕೆ.ಆರ್.ನಗರದ ಕಾಗಿನೆಲೆ ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶಾಸಕ ಡಿ.ರವಿಶಂಕರ್, ಮಾಜಿ ಸಚಿವರಾದ ಸಾ.ರಾ.ಮಹೇಶ್, ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ಬಿಇಓ ಆರ್.ಕೃಷ್ಣಪ್ಪ, ಪೊಲೀಸ್ ಇನ್ಸ್ ಪೆಕ್ಟರ್ ಪಿ.ಸಂತೋಷ್, ಹೊಸ ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮಿರ್ಲೆ ಅಣ್ಣೇಗೌಡ, ಜಿ.ಪಂ.ಮಾಜಿ ಸದಸ್ಯ ಎಂ.ಟಿ.ಕುಮಾರ್, ಸಮಾಜದ ಮುಖಂಡ ಅರ್ಜುನಹಳ್ಳಿ ಗಣೇಶ್ ಭಾಗವಹಿಸಲಿದ್ದಾರೆ ಮಠದ ಭಕ್ತರು, ವಿವಿದ ಸಂಘಸಂಸ್ಥೆಗಳ ಸದಸ್ಯರು, ಹೊಸ ಅಗ್ರಹಾರ ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಕಿ ಆಗಮಿಸಿ ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸಿ ಕೊಡಿ ಎಂದು ತಿಳಿಸಿದರು.
ಜಿ.ಪಂ.ಮಾಜಿ ಸದಸ್ಯ ಎಂ.ಟಿ.ಕುಮಾರ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಅರ್ಜುನಹಳ್ಳಿ ಗಣೇಶ್, ಗ್ರಾ.ಪಂ.ಸದಸ್ಯ ಡಿ.ಎಸ್.ಯೋಗೇಶ್ ಮೊದಲಾದವರು ಇದ್ದರು.