Saturday, April 19, 2025
Google search engine

HomeUncategorizedರಾಷ್ಟ್ರೀಯಬಿಆರ್ ​ಎಸ್​  ಪಕ್ಷದ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು

ಬಿಆರ್ ​ಎಸ್​  ಪಕ್ಷದ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು

ಹೈದರಾಬಾದ್: ತೆಲಂಗಾಣದ ಬಿಆರ್ ​ಎಸ್​  ಪಕ್ಷದ ಶಾಸಕಿ ಲಾಸ್ಯ ನಂದಿತಾ (33) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹೈದರಾಬಾದ್ ಒಆರ್‌ ಆರ್‌ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಕೆ ಪ್ರಯಾಣಿಸುತ್ತಿದ್ದ ಅತಿವೇಗದಲ್ಲಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇತ್ತೀಚೆಗಷ್ಟೇ ಶಾಸಕಿ ಬಿಆರ್‌ ಎಸ್ ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆದರೆ ಆಕೆ ಸುರಕ್ಷಿತವಾಗಿ ಅಪಘಾತದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಆದರೆ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಆಕೆ ದಾರುಣವಾಗಿ ಸಾವಿಗೀಡಾಗಿದ್ದಾರೆ.

ಸಿಕಂದರಾಬಾದ್​ ನ ಕಂಟೋನ್ಮೆಂಟ್ ಶಾಸಕಿ ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ ಎಸ್ ನಾಯಕರು ಕಂಬನಿ ಮಿಡಿದಿದ್ದಾರೆ.

RELATED ARTICLES
- Advertisment -
Google search engine

Most Popular