Saturday, April 19, 2025
Google search engine

Homeರಾಜ್ಯಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲರ್: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲರ್: ಚಾಲಕನಿಗೆ ಗಾಯ

ದಾಂಡೇಲಿ: ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ.

ನಗರದಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ದಾಂಡೇಲಿ -ಅಂಬಿಕಾ‌ ನಗರ ರಸ್ತೆಯಲ್ಲಿರುವ ಬಡಕಾನಶಿರಡಾದಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ.

ಘಟನೆಯ ಪರಿಣಾಮ ಟೆಂಪೋ ಟ್ರಾವೆಲರ್ ನಜ್ಗುಗುಜ್ಜಾಗಿದ್ದು, ಟೆಂಪೋ ಟ್ರಾವೆಲರ್‌ ನಲ್ಲಿದ್ದ ಪ್ರಯಾಣಿಕರಲ್ಲಿ ಓರ್ವನಿಗೆ ಗಾಯವಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ.

ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular