Saturday, April 19, 2025
Google search engine

HomeUncategorizedರಾಷ್ಟ್ರೀಯಹರಿಯಾಣ: ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆ

ಹರಿಯಾಣ: ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆ

ಹರಿಯಾಣ: ಭಾರತೀಯ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ನಫೆ ಸಿಂಗ್ ರಾಠಿ ಮಾತ್ರವಲ್ಲದೇ ಗುಂಡಿನ ದಾಳಿಯಲ್ಲಿ ಪಕ್ಷದ ಮತ್ತೊಬ್ಬ ಕಾರ್ಯಕರ್ತ ಜೈ ಕಿಶನ್‌ ಎಂಬವರು ಕೂಡಾ ಸಾವನ್ನಪ್ಪಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ಅಭಯ್‌ ಚೌಟಲ ತಿಳಿಸಿದ್ದಾರೆ.

ಚಂಡೀಗಢದ ಜಜ್ಜರ್ ಜಿಲ್ಲೆಯ ಬಹದ್ದೂರ್‌ಗಢ ಎಂಬಲ್ಲಿ ನಫೆ ಸಿಂಗ್ ರಾಠಿ ಪ್ರಯಾಣಿಸುತ್ತಿದ್ದಾಗ ಅವರ ಎಸ್‌ ಯುವಿ ಮೇಲೆ ಗುಂಡುಗಳನ್ನು ಹೊಡೆಯಲಾದ ಪರಿಣಾಮ ಭದ್ರತೆಗಾಗಿ ನೇಮಿಸಿಕೊಂಡಿದ್ದವರಲ್ಲಿ ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ.

ದಾಳಿ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಗುಂಡಿನ ದಾಳಿಯ ವೇಳೆ ಗಂಭೀರ ಗಾಯಗೊಂಡಿದ್ದ ನಫೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ನಫೆ ಮೃತ್ತಪಟ್ಟಿರುವುದಾಗಿ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

RELATED ARTICLES
- Advertisment -
Google search engine

Most Popular