ರಾಮನಗರ: ಸಾರಿಗೆ, ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ರಾಮನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು ನಾಳೆ ಫೆ. ೨೯ರ ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಮಾಗಡಿ ತಾಲ್ಲೂಕಿನಲ್ಲಿ ಸರ್ಕಾರದ ಮಹಾತಾಕಾಂಕ್ಷೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇದೇ ಮಾರ್ಚ್ ೧ರ ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ಸೋಲೂರಿನಲ್ಲಿ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಧ್ಯಾಹ್ನ ೨.೩೦ಕ್ಕೆ ರಾಮನಗರದಲ್ಲಿ ಆಯೋಜಿಸಲಾಗಿರುವ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಮಾ. ೩ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಸರ್ಕಾರದ ಮಹಾತಾಕಾಂಕ್ಷೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸುವರು.