Tuesday, April 22, 2025
Google search engine

Homeರಾಜ್ಯಸುದ್ದಿಜಾಲಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಸಲು ಆದೇಶ

ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಸಲು ಆದೇಶ

ರಾಮನಗರ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉಂಡೆಕೊಬ್ಬರಿಯನ್ನು ಪ್ರತಿ ಕ್ವಿಂಟಾಲ್‌ಗೆ ೧೨ ಸಾವಿರ ರೂ.ಗಳಂತೆ ಖರೀದಿಸಲು ಆದೇಶಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದ್ದಾರೆ. ೨೦೨೩-೨೪ನೇ ಸಾಲಿನಲ್ಲಿ ರಾಮನಗರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಉಂಡೆಕೊಬ್ಬರಿ ಖರೀದಿಸಲು ಮರು ಆದೇಶ ನೀಡಿರುತ್ತದೆ.

ಉಂಡೆಕೊಬ್ಬರಿ ನೋಂದಣಿ/ಖರೀದಿ ಪ್ರಕ್ರಿಯೆಯಲ್ಲಿ ಎನ್.ಐ.ಸಿ ರವರು ಸಿದ್ದಪಡಿಸಿರುವ ಫ್ರೂಟ್ಸ್ ದತ್ತಾಂಶದಲ್ಲಿನ ಬೆಳೆ ಸಮೀಕ್ಷೆ ಪ್ರಕಾರ ನೊಂದಣಿ ಪ್ರಕ್ರಿಯೆ ಕೈಗೊಳ್ಳಲು ರೈತರು ಆಧಾರ್ ಕಾರ್ಡ್‌ನೊಂದಿಗೆ ಖುದ್ದಾಗಿ ಬಂದು ಬಯೋಮೆಟ್ರಿಕ್ ಆಧಾರಿತ ವಿಧಾನದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ರೈತರಿಗೆ ಪ್ರತಿ ಎಕರೆಗೆ ೬ ಕ್ವಿಂಟಾಲ್ ಮತ್ತು ಗರಿಷ್ಠ ೧೫ ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular