ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿಗೆ ಗುರುವಾರ ಆಗಮಿಸಿ ವಿಚಾರಣೆಗೆ ಹಾಜರಾಗಬೇಕೆಂದು ಅಖಿಲೇಶ್‌ಗೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ೨೦೧೨-೨೦೧೬ರ ಅವಧಿಯಲ್ಲಿ ಹಮೀರ್‌ಪುರ್‌ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಅಖಿಲೇಶ್‌ಗೆ ಸೂಚಿಸಲಾಗಿದೆ.