ಕಲಬುರಗಿ: ಕಲಬುರಗಿ ಜಿಲ್ಲೆಗೆ ಚಕ್ರವರ್ತಿ ಸೂಲಿಬೆಲೆ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಕಲಬುರಗಿ ಹೈಕೋರ್ಟ್ ತೆರವುಗೊಳಿಸಿದೆ.
ಚಿತ್ತಾಪುರದಲ್ಲಿಂದು ನಮೋ ಬ್ರಿಗೆಡ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲೂಕ ಆಡಳಿತ ಅನುಮತಿ ನೀಡಿರಲಿಲ್ಲ. ಅಲ್ಲದೇ ಸೂಲಿಬೆಲೆ ಚಕ್ರವರ್ತಿ ಕಲಬುರಗಿ ಜಿಲ್ಲೆಗೆ ಎಂಟ್ರಿಯಾಗದಂತೆ ನಿರ್ಬಂಧ ವಿಧಿಸಲಾಗಿತ್ತು.
ಆದರೆ ಇದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ, ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್, ಸೂಲಿಬೆಲೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವಂತೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.