Sunday, April 20, 2025
Google search engine

Homeರಾಜ್ಯಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ ..!

ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ: ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ ..!

ಮಂಗಳೂರು(ದಕ್ಷಿಣ ಕನ್ನಡ): ಹಿಂದೂ‌ ಸಂಘಟನೆಯೊಂದರ ಮುಖಂಡ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವುದಾಗಿ ಪುತ್ತಿಲ ಪರಿವಾರ ಫೆ 29 ರಂದು ಅಧಿಕೃತವಾಗಿ ಘೋಷಿಸಿದ್ದು, ಇದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.

ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆ. ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಅವರ ಮನವೊಲಿಕೆಗೆ ಪಾರ್ಟಿ ಪ್ರಯತ್ನ ಮಾಡಿದೆ. ಬಿಜೆಪಿ ಬಹಳ ವರ್ಷಗಳ ಹೋರಾಟದಿಂದ ಅತೀ ದೊಡ್ಡ ಪಾರ್ಟಿಯಾಗಿ ಬೆಳೆದಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನ್ನು ಎದುರಿಸಿ ಲೋಕಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದಿದೆ ಎಂದು ಅವರು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಪಕ್ಷಕ್ಕೆ ಎದಯರಾಳಿಯ ಪ್ರಶ್ನೆ ಇಲ್ಲ. ಇದು ಪ್ರಜಾಪ್ರಭುತ್ವ, ಚುನಾವಣಾ ನಿಲ್ಲುವ ಹಕ್ಕು, ಎಲ್ಲರಿಗೂ ಇದೆ. ಪ್ರತಿ ಚುನಾವಣೆ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವವಾಗುತ್ತದೆ. ಆ ಎಲ್ಲಾ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆ ಎಂದು ಮುಂಬರುವ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ರಾಮಮಂದಿರ ನಿರ್ಮಾಣದ ವಾದ ಬಳಿಕ ಬಿಜೆಪಿ ಪರವಾದ ವಾತಾವರಣ ಅದ್ಬುತವಾಗಿದೆ.

ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಬೇರೆ ಈಗಿನ ವಿಚಾರ ಬೇರೆ ಎಂದು ಪುತ್ತಿಲ ಪರಿವಾರಕ್ಕೆ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular