ಮಂಗಳೂರು: ದಕ್ಷಿಣ ಕನ್ನಡಜಿಲ್ಲೆಯ ಹಿರಿಯ ಪತ್ರಕರ್ತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನೋಹರ್ ಪ್ರಸಾದ್ (64) ಅವರು ನಿಧನ ಹೊಂದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನೋಹರ್ ಪ್ರಸಾದ್ ಅವರು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಅವರು ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದ ಇವರು ಮುಖ್ಯ ವರದಿಗಾರರಾಗಿ, ಬ್ಯೂರೋ ಚೀಫ್, ಸಹಾಯಕ ಸಂಪಾದಕರಾಗಿ ಸೇವೆಸಲ್ಲಿಸಿದ್ದರು. ಸುಮಾರು ನಾಲ್ಕು ದಶಕಗಳ ಕಾಲ ಪತ್ರಕಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಎರಡು ವರ್ಷಗಳ ಹಿಂದೆಯಷ್ಟೇ ನಿವೃತ್ತಿಗೊಂಡಿದ್ದರು.
ಸರಳ ಸಜ್ಜನಿಯ ವ್ಯಕ್ತಿತ್ವವನ್ನು ಹೊಂದಿದ್ದ ಇವರ ಅಗಲಿಕೆಗೆ ಪತ್ರಿಕಾ ರಂಗ ಕಂಬನಿ ಮಿಡಿದಿದೆ.