ರಾಮನಗರ: ೨೦೨೩-೨೪ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇದೇ ಇಂದು ಮಾ. ೧ರ ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.