ಮೈಸೂರು: ವರುಣಾ ಕ್ಷೇತ್ರದ ಎಲ್ಲಾ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ವರುಣಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ವರುಣಾ ಕ್ಷೇತ್ರದ ಮೂಡಹಳ್ಳಿ, ಮಲ್ಲರಾಜಯ್ಯನಹುಂಡಿ, ಮಾದಯ್ಯನಹುಂಡಿ, ಹೊಸಕೋಟೆ, ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ವರುಣಾ ಕ್ಷೇತ್ರದ ಜನರು ಹೆಚ್ಚು ಮತಗಳನ್ನು ಕೊಟ್ಟು ಸಿದ್ದರಾಮಯ್ಯರವರನ್ನು ಗೆಲ್ಲಿಸಿದ್ದರಿಂದ ಇಂದು ೨ನೇ ಭಾರಿಗೆ ಮುಖ್ಯಮಂತ್ರಿಗಯಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಒದಗಿಸುವಂತಹ ಬಜೆಟ್ ಅನ್ನು ಮಂಡಿಸಿದ್ದಾರೆ. ಗ್ರಾಮಗಳ ಅಭಿವೃದ್ಧಿಗೂ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ.
ಕಳೆದ ೫ ವರ್ಷದಲ್ಲಿ ಬಿಜೆಪಿ ಸರ್ಕಾರ ವರುಣಾ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುಧಾನ ಬಿಡುಗಡೆ ಮಾಡಿರಲಿಲ್ಲ. ಆದ್ದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದ ಅವರು. ನಿಗಮಗಳಿಂದ ಲೋನ್ ಕೇಳಿದ್ದೀರಿ. ರಸ್ತೆ ಅಭಿವೃದ್ಧಿ, ಪಡಿತರ ಚೀಟಿ, ಮನೆಗಳು ಬೇಕು ಎಂದು ಇನ್ನೂ ಹಲವಾರು ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ಕೊಟ್ಟಿದ್ದೀರಿ. ಈ ಎಲ್ಲಾ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ಪರಿಹರಿಸಿಕೊಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖ್ಯಮಂತ್ರಿಗಳ ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್ ಕುಮಾರ್, ಗ್ರಾಮದ ಮುಖಂಡರುಗಳು ಹಾಜರಿದ್ದರು.