Sunday, April 20, 2025
Google search engine

Homeಸ್ಥಳೀಯಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರು ಆಶ್ಚರ್ಯವಿಲ್ಲ: ಪ್ರತಾಪ್​ ಸಿಂಹ

ಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರು ಆಶ್ಚರ್ಯವಿಲ್ಲ: ಪ್ರತಾಪ್​ ಸಿಂಹ

ಮೈಸೂರು: ಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರು ಆಶ್ಚರ್ಯ ಪಡಬೇಡಿ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ, ನೀವು ಕಾಂಗ್ರೆಸ್​ ಗೆ ಮತ ಹಾಕಿದರೆ ತಾಲಿಬಾನಿ ಸರ್ಕಾರ ಬರುತ್ತೆ ಅಂತ. ಇವತ್ತು ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿಯಾಗಿವೆ. ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಮೊಳಗಿದೆ ಅಂದರೆ ಯಾರು ಅಧಿಕಾರ ಮಾಡುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.

ಬಾಂಬ್ ಬ್ಲಾಸ್ಟ್‌ಗಳು ಶುರುವಾಗಿವೆ. ಹಿಂದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಹತ್ತು ವರ್ಷಗಳ ಕಾಲ ಸರಣಿ ಬಾಂಬ್ ಬ್ಲಾಸ್ಟ್‌ ಗಳು ನಡೆದಿದ್ದವು. ಚಿನ್ನಸ್ವಾಮಿ ಸ್ಟೇಡಿಯಂ, ಲುಂಬಿಣಿ ಗಾರ್ಡನ್, ಜರ್ಮನ್ ಬೇಕರಿ, ಪುಣೆ, ಮುಂಬೈ, ಡೆಲ್ಲಿ, ಸೂರತ್ ದೇಶಾದ್ಯಂತ ಸರಣಿ ಬಾಂಬ್ ಬ್ಲಾಸ್ಟ್‌ಗಳು ನಡೆಯುತ್ತಿದ್ದವು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಹಾಗಾಗಿ ಬಾಂಬ್ ಬ್ಲಾಸ್ಟ್‌ ಗಳು ಪ್ರಾರಂಭವಾಗಿವೆ. ಇದು ಟ್ರೈಲರ್ ಮಾತ್ರ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ. ಒಸಮಾಬಿನ್, ಮುಲ್ಲಾ ಉಮರ್‌ ಅಂತಹವರು ಅಧಿಕಾರ ಮಾಡುವಾಗ ಬಾಂಬ್ ಹಾಕುವವರಿಗೆ ರಕ್ಷಣೆ ಕೊಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಅವರೆ, ನೀವು ಮುಸ್ಲಿಮರ ಕೈ ಕಡೆದರೂ ಅವರು ನಿಮಗೇ ಮತ ಹಾಕುತ್ತಾರೆ. ಮತ್ತೇಕೆ ನೀವು ರಕ್ಷಣೆ ಮಾಡಲು ಹೊರಟಿದ್ದಿರಿ? ಇದೇ ರೀತಿ ಮುಂದುವರಿದರೆ ಕರ್ನಾಟಕ ಯಾವ ಸ್ಥಿತಿಗೆ ಬರುತ್ತೆ ಯೋಚನೆ ಮಾಡಿ ಎಂದರು.

RELATED ARTICLES
- Advertisment -
Google search engine

Most Popular