ನವದೆಹಲಿ : ಜಾರಿ ನಿರ್ದೇಶನಾಲಯದ ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
೨೦೧೮ ರಲ್ಲಿ ಡಿಕೆಶಿ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ನ್ಯಾ. ಸೂರ್ಯ ಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ ಇಂದು ರದ್ದುಗೊಳಿಸಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಸುಪ್ರೀಂ ಕೋರ್ಟ್‌ನ ಈ ಆದೇಶ ಡಿಕೆಶಿಗೆ ಸಿಕ್ಕಿದ ದೊಡ್ಡ ಗೆಲುವು ಎಂದೇ ವಿಶ್ಲೇಷಿಸಲಾಗುತ್ತಿದೆ.
ಆಗಸ್ಟ್ ೨೦೧೯ ರಲ್ಲಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ಕೆ ಶಿವಕುಮಾರ್ ಮತ್ತು ಇತರೇ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಪೀಠ ಇಂದು ಮಹತ್ವದ ಆದೇಶ ನೀಡಿದೆ.