ರಾಮನಗರ:ರಾಮನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇದೇ ಮಾ. 9ರಂದು ನಡೆಯಬೇಕಿದ್ದ ಮೊದಲನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಅನಿವಾರ್ಯ ಕಾರಣಗಳಿಂದ ಅದರ ಬದಲಿಗೆ ಮಾ. 16ಕ್ಕೆ ಮರು ನಿಗದಿಪಡಿಸಲಾಗಿರುತ್ತದೆ.
ಆದ್ದರಿಂದ ರಾಮನಗರ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾ. 16ರಂದು ನಡೆಸಲಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತ ಎನ್.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.