Wednesday, April 23, 2025
Google search engine

HomeUncategorizedರಾಷ್ಟ್ರೀಯನಾಪತ್ತೆಯಾಗಿದ್ದ ಬಾಲಕಿಯ ಶವ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಚರಂಡಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಬಾಲಕಿಯ ಶವ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಚರಂಡಿಯಲ್ಲಿ ಪತ್ತೆ

ಪುದುಚೇರಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕಿಯ ಮೃತದೇಹ ಪುದುಚೇರಿಯ ಚರಂಡಿಯಿಂದ ಪತ್ತೆಯಾಗಿದೆ. ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿರುವುದು ಕಂಡುಬಂದಿದೆ.

ಶನಿವಾರ ಬಾಲಕಿ ಆಟವಾಡುತ್ತಿದ್ದಳು ಬಳಿಕ ನಾಪತ್ತೆಯಾಗಿದ್ದಳು, ನಂತರ ಆಕೆಯ ಪೋಷಕರಾದ ನಾರಾಯಣನ್ ಮತ್ತು ಮೈಥಿಲಿ ಆಕೆಯನ್ನು ಹುಡುಕಿದರೂ ವಿಫಲರಾಗಿದ್ದಾರೆ. ಬಳಿಕ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದು, ಬಾಲಕಿಯ ಪತ್ತೆಗೆ ತಂಡ ರಚಿಸಲಾಗಿದೆ.

ಆದರೆ, ಎರಡು ದಿನಗಳ ಬಳಿಕ ಬಾಲಕಿಯ ಕೊಳೆತ ಶವ ಆಕೆಯ ನಿವಾಸದ ಬಳಿಯ ಚರಂಡಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿತ್ತು. ಮೃತದೇಹವನ್ನು ಹೊರತೆಗೆದ ಕೂಡಲೇ ಸ್ಥಳೀಯರು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕುರಿತು ಪ್ರಶ್ನೆ ಮಾಡಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಅರೆಸೇನಾ ಪಡೆಗಳನ್ನು ಸ್ಥಳಕ್ಕೆ ಕರೆಸಲಾಗಿತ್ತು. ಏತನ್ಮಧ್ಯೆ, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಪೊಲೀಸರು ಐದು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular