ಹೊಸದಿಲ್ಲಿ: ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ ಹಲವು ಸಮನ್ಸ್‌ಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಹೊಸ ದೂರುಗಳ ಮೇರೆಗೆ ದೆಹಲಿ ಹೈಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.
ದಿಲ್ಲಿ ಅಬಕಾರಿ ನೀತಿ ಹಗರಣ ಪ್ರಕರಣದ ಸಂಬಂಧ ಅರವಿಂದ್ ಕೇಜ್ರಿವಾಲ್‌ರನ್ನು ವಿಚಾರಣೆಗೊಳಪಡಿಸಲು ಬಯಸಿದ್ದ ಜಾರಿ ನಿರ್ದೇಶನಾಲಯವು, ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಪ್ರಕರಣದಡಿ ತಾನು ಜಾರಿಗೊಳಿಸಿರುವ ಸಮನ್ಸ್‌ಗಳಿಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗಿದ್ದಾರೆ ಎಂದು ನ್ಯಾಯಾಲಯದ ಮೆಟ್ಟಿಲೇರಿದೆ. ಈ ದೂರನ್ನು ಆಧರಿಸಿ ದಿಲ್ಲಿ ನ್ಯಾಯಾಲಯವೊಂದು ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಜಾರಿಗೊಳಿಸಿದೆ.