Saturday, April 19, 2025
Google search engine

Homeಸ್ಥಳೀಯಕಾಂಗ್ರೆಸ್‌ನ ಮಾಜಿ ಶಾಸಕ, ಮೇಯರ್ ವಾಸು ನಿಧನ

ಕಾಂಗ್ರೆಸ್‌ನ ಮಾಜಿ ಶಾಸಕ, ಮೇಯರ್ ವಾಸು ನಿಧನ

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ ಶಾಸಕ ವಾಸು (೭೨) ಶನಿವಾರ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಕೊನೆಯುಸಿರೆಳೆದಿದ್ದಾರೆ.

ಮೇಯರ್ ವಾಸು ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ ವಾಸು ಅವರು, ೨೦೧೩ರಲ್ಲಿ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ತಮ್ಮ ಐದು ವರ್ಷಗಳ ಶಾಸಕ ಅವಧಿಯಲ್ಲಿ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು.
ವಿದ್ಯಾವಿಕಾಸ ಎಂಜಿನಿಯರಿಂಗ್ ಕಾಲೇಜು ನಡೆಸುತ್ತಿದ್ದರು. ಸ್ಥಳೀಯ ಪ್ರಜಾನುಡಿ ಪತ್ರಿಕೆಯನ್ನೂ ನಡೆಸುತ್ತಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಆಕ್ರೋಶಗೊಂಡ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದರು. ಈಚೆಗೆ, ಲೋಕಸಭಾ ಚುನಾವಣೆ ಬಗ್ಗೆ ಪಕ್ಷದಿಂದ ಆಯೋಜಿಸಿದ್ದ ಪ್ರಮುಖರ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸುರವರು ಮೊಯ್ಲಿ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

RELATED ARTICLES
- Advertisment -
Google search engine

Most Popular