Sunday, April 20, 2025
Google search engine

Homeರಾಜಕೀಯಬರಗಾಲ ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿಫಲ: ಶಾಸಕ ಬಿ.ವೈ.ವಿಜಯೇಂದ್ರ

ಬರಗಾಲ ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿಫಲ: ಶಾಸಕ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರಗಾಲ ನಿರ್ವಹಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.

ನಗರದ ಮಲ್ಲೇಶ್ವರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ. ೮೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬರದ ಸಮಸ್ಯೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಇದೆ. ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂದು ತಿಳಿಸಿದರು.

ಇಂದು ಸೋಮವಾರ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ನಗರ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದೇನೆ. ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡುತ್ತಿಲ್ಲ. ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

RELATED ARTICLES
- Advertisment -
Google search engine

Most Popular