Sunday, April 20, 2025
Google search engine

Homeಸ್ಥಳೀಯಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಇಲಾಖೆಗಳ ಸಮನ್ವಯತೆ ಪ್ರಮುಖ: ದಿನೇಶ್ ಬಿ.ಜೆ

ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಇಲಾಖೆಗಳ ಸಮನ್ವಯತೆ ಪ್ರಮುಖ: ದಿನೇಶ್ ಬಿ.ಜೆ

ಮೈಸೂರು: ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಮಕ್ಕಳ ಮೇಲೆ ಯಾವುದೇ ದೌರ್ಜನ್ಯವಾದರೂ ಅದು ಸಾಂವಿಧಾನಿಕವಾದಂತಹ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಹೀಗಾಗಿ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಎಲ್ಲಾ ಇಲಾಖೆಗಳ ಸಮನ್ವಯ ಇದರಲ್ಲಿ ಪ್ರಾಮುಖ್ಯ ವಹಿಸುತ್ತದೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಜಿ.ದಿನೇಶ್ ಅವರ ಹೇಳಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸೋಮವಾರ ಜಿಲ್ಲಾ ಪೋಲಿಸ್ ವರೀಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಬಾಲನ್ಯಾಯಕಾಯ್ದೆ, ಮಿಷನ್ ವಾತ್ಸಲ್ಯ, ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವಿಕೆ ಮುಖ್ಯವಾಗುತ್ತದೆ. ಮಕ್ಕಳ ಮೇಲೆ ಆಗುವ ದೌರ್ಜನ್ಯಗಳ ವಿರುದ್ಧ  ಕ್ರಮಗಳನ್ನು ಯಾವ ಯಾವ ಇಲಾಖೆಗಳು ತೆಗೆದುಕೊಳ್ಳಬೇಕು ಅಂತಾ ಕಾನೂನಿನಲ್ಲಿ ಸೂಚಿಸಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಿಕೆಯ ಬಗ್ಗೆ ಸೂಕ್ತ ಕ್ರಮ ಕೈ ಗೊಂಡರೆ ಮಾತ್ರ ಮುಂದೆ  ಕಾನೂನನ್ನು ಬಳಸಿಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಮನ್ವಯತೆ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.

ಮಕ್ಕಳೊಂದಿಗೆ ಸಂವೇದನೆ ಶೀಲತೆಯಿಂದ ವರ್ತಿಸಬೇಕು. ಒಂದು ಆ ಸೂಕ್ಷ್ಮತೆಯನ್ನು ನಾವು ಅಳವಡಿಸಕೊಳ್ಳದಿದ್ದರೆ ಮಕ್ಕಳ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳುವಲ್ಲಿ ವಿಫಲರಾಗುತ್ತೇವೆ. ನಮಗೆ ಪ್ರತಿನಿತ್ಯ ಕೆಲಸ ಇರುತ್ತದೆ. ಆ ಕೆಲಸದ ಒತ್ತಡದ ನಡುವೆಯೂ ಮಕ್ಕಳ ಮೇಲಿನ ಯಾವುದೇ ಪ್ರಕರಣ ಬಂದರೂ ಸಹ ನಾವು ಅತ್ಯಂತ ಸಂವೇದನ ಶೀಲತೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಸೂಕ್ಷರೀತಿಯಲ್ಲಿ ತ್ವರಿತವಾಗಿ ಕ್ರಮವನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಮಕ್ಕಳು ಮತ್ತೊಂದು ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.

ಮಕ್ಕಳ ದೌರ್ಜನ್ಯ ತಡೆಯಲು ಹಲವಾರು ಕಾನೂನುಗಳಿದ್ದರೂ ಸಹ ಎಲ್ಲೋ ಒಂದು ಕಡೆ ನಾವೆಲ್ಲ ಎಡವುತ್ತಿದ್ದೆವೆ. ಕಾರಣ ಒಂದು ಇತ್ತೀಚೆಗೆ ಒಂದು ತಿಂಗಳ ಹಿಂದೆ ಪಿರಿಯಾಪಟ್ಟಣದಲ್ಲಿ ನಡೆದ ಬಾಲ್ಯ ವಿವಾಹ ಆದಂತಹ ಪ್ರಕರಣದಲ್ಲಿ CWC (ಚೈಲ್ಡ್ ವೆಲ್ ಫೇರ್ ಕಮಿಟಿ) ಆ ಬಾಲ್ಯ ವಿವಾಹ ತಡೆಯಲು ಎಫ್.ಐ.ಆರ್ ಹಾಕಲು ಕ್ರಮ ಕೈ ಗೊಳ್ಳಿ ಎಂದು ತಿಳಿಸಿದರೂ ಸಹ ದೇವಸ್ಥಾನ ನಮ್ಮ ವ್ಯಾಪ್ತಿಗೆ ಬರಲ್ಲ ಎಂದು ಹೇಳಿದ ಪಿ.ಪಟ್ಟಣ ಪೋಲಿಸ್ ಅವರು ಹುಣಸೂರು ಪೋಲಿಸ್ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ಮಾಹಿತಿಯನ್ನು ನೀಡಿದ್ದರು. ಆದರೆ ಎಫ್.ಐ.ಆರ್ ಮಾತ್ರ ಆಗುವುದಿಲ್ಲ ಎಂದು ತಿಳಿಸಿದರು.

ಮೈಸೂರಿನಂತಹ ನಗರ ಪ್ರದೇಶಗಳಲ್ಲಿ ಹೀಗೆ  ಆಗುತ್ತಿರುವುದು ಆಘಾತಕಾರಿ ಎಂದರು. ಕಾನೂನು ಸಿ.ಆರ್.ಪಿ.ಸಿ, ಜೆ.ಜೆ ಆ್ಯಕ್ಟ್, ಪೊಕ್ಸೊ ಕಾಯ್ದೆ ಇರಬಹುದು, ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳು   ಯಾವುದೇ  ಮಾಹಿತಿ ಬಂದರೆ ಪ್ರಕರಣ ತ್ವರಿತವಾಗಿ ಪ್ರಕರಣವನ್ನು ದಾಖಲಿಸಿಕೊಳ್ಳಬೇಕೆಂದು  ಹೇಳಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್.ಮಂಜು ಅವರು ಮಾತನಾಡಿ, ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಚಿಕ್ಕಮಕ್ಕಳು ಸಸಿಗಳಿದ್ದಹಾಗೆ. ಗಿಡಗಳಿಗೆ ಯಾವ ರೀತಿ ಪೋಷಣೆ ಮಾಡಿ ಬೆಳೆಸುತ್ತೆವೆಯೋ ಹಾಗೆಯೇ ಮಕ್ಕಳನ್ನು ಬೆಳೆಸಬೇಕು.  ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಅಧಿಕಾರಿಗಳು ಕ್ರಿಯಾಶೀರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತರಾದ ಎಸ್ ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಬಿ.ಎನ್ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular