Sunday, April 20, 2025
Google search engine

Homeರಾಜ್ಯಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಮ್ಮ ಕೈಯಾರೆ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಊಟ ಬಡಿಸಿದ ಮುಖ್ಯಮಂತ್ರಿಗಳು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ  ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.

ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ.  ಈ ಪೈಕಿ ಈಗಾಗಲೇ 40 ಸಿದ್ದವಾಗಿದ್ದು, ಉಳಿದ್ದು  ಸಿದ್ದಗೊಳ್ಳುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ  ಈಗಾಗಲೇ ಒಂದು  ಉದ್ಘಾಟಿಸಲಾಗಿದೆ. ಮತ್ತೊಂದು ಇಂದಿರಾ ಕ್ಯಾಂಟೀನ್ ಇಲ್ಲಿ ಬರಲಿದೆ. ವಿಮಾನ ನಿಲ್ದಾಣದಲ್ಲಿ 2 ಇಂದಿರಾ ಕ್ಯಾಂಟೀನ್ ಬರಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ.  ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ  ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು  ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದರು.

ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ

ಬೆಂಗಳೂರಿನ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular