Tuesday, April 22, 2025
Google search engine

Homeರಾಜ್ಯಸುದ್ದಿಜಾಲಕಲಬುರಗಿ: ಬಾಲಕಿ ಮನೆಗೆ ಸಚಿವರ ಭೇಟಿ,ಪೋಷಕರಿಗೆ ಸಾಂತ್ವಾನ

ಕಲಬುರಗಿ: ಬಾಲಕಿ ಮನೆಗೆ ಸಚಿವರ ಭೇಟಿ,ಪೋಷಕರಿಗೆ ಸಾಂತ್ವಾನ


ಕಲಬುರಗಿ: ಇತ್ತೀಚಿಗೆ ಚಿತ್ತಾಪೂರ ತಾಲೂಕಿನ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.

ಬಾಲಕಿ ಆತ್ಮಹತ್ಯೆ ಗೆ ದುಃಖ ವ್ಯಕ್ತಪಡಿಸಿದ ಸಚಿವರು ಈ ಸಂಬಂಧ ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್ ಮಾಡಿಸಲಾಗುವುದು ಎಂದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ತಮ್ಮ ಪಕ್ಷದ ವತಿಯಿಂದ 1 ಲಕ್ಷ ರೂ. ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಶೇಖ್ ಶಾಷಾವಲಿ, ಮುಖಂಡರಾದ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ ಸೇರಿದಂತೆ ಅನೇಕರಿದ್ದರು.

RELATED ARTICLES
- Advertisment -
Google search engine

Most Popular