Tuesday, April 22, 2025
Google search engine

Homeರಾಜ್ಯಗ್ಯಾರಂಟಿ ಸಮಾವೇಶ ಹಿನ್ನೆಲೆ: ಎನ್.ವಿ.ಮೈದಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪೂರ್ವಸಿದ್ಧತೆ ಪರಿಶೀಲನೆ

ಗ್ಯಾರಂಟಿ ಸಮಾವೇಶ ಹಿನ್ನೆಲೆ: ಎನ್.ವಿ.ಮೈದಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪೂರ್ವಸಿದ್ಧತೆ ಪರಿಶೀಲನೆ

ಕಲಬುರಗಿ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನಿಡಲಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ನಗರದ ಎನ್.ವಿ.ಮೈದಾನಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆ ಪರಿಶೀಲಿಸಿದರು.

ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುವ ಕಾರಣ ಎನ್.ವಿ.ಮೈದಾನದಲ್ಲಿ ಸೂಕ್ತ ಅಸನ ಭದ್ರತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಊಟಕ್ಕೆ ಪ್ರತ್ಯೇಕ ಕೌಂಟರ್ ತೆರೆಯಬೇಕು. ಅಲ್ಲಲ್ಲಿ ಬಯೋ ಟಾಯಲೆಟ್ ಅಳವಡಿಸಬೇಕು. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕೆಂದ‌ ಸಚಿವರು, ಕಾರ್ಯಕ್ರಮ‌ದ ರೂಪು ರೇಷೆ ಕುರಿತು ಇವೆಂಟ್ ಮ್ಯಾನೇಜರ್ ಗಳಿಂದ ಮಾಹಿತಿ ಪಡೆದರು.

ಕಾರ್ಯಕ್ರಮಕ್ಕೆ ಜಿಲ್ಲೆಯ‌ ವಿವಿಧ ತಾಲೂಕಿನಿಂದ ಬರುವ ಜನರಿಗೆ ಬೆಳಿಗ್ಗೆ ದಾರಿ‌ ಮದ್ಯದಲ್ಲಿಯೇ ಉಪಹಾರದ ವ್ಯವಸ್ಥೆ ಮಾಡಬೇಕು. ಒಟ್ಟಾರೆಯಾಗಿ ಕಾರ್ಯಕ್ರಮ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ‌ ಕೆಲಸ ಮಾಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಡಿ.ಸಿ.ಬಿ.ಫೌಜಿಯಾ ತರನ್ನುಮ್, ಅಪರ‌ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಸಹಾಯಕ ಆಯುಕ್ತರಾದ ರೂಪಿಂದರ್ ಕೌರ್, ಆಶಪ್ಪ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

RELATED ARTICLES
- Advertisment -
Google search engine

Most Popular