ಮಂಡ್ಯ: ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆ ಅಡಿ ಮಂಡ್ಯ ನಗರದ ನಗರಸಭೆ ಕಚೇರಿ ಪಕ್ಕದಲ್ಲಿರುವ ಸಿಟಿ ಕ್ಲಬ್ ಎದುರು ಅಳವಡಿಸಿರುವ ೭೦೦ ಮಿ. ಮೀ. ವ್ಯಾಸದ ಎಂ.ಎಸ್. ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಸೋರುವಿಕೆ ಕಂಡುಬಂದಿದ್ದು, ಸದರಿ ಕೊಳವೆ ಮಾರ್ಗದ ದುರಸ್ತಿ ಕಾಮಗಾರಿಯನ್ನು ಇಂದು ಮತ್ತು ನಾಳೆ ಮಾರ್ಚ್ ೧೩ರಂದು ಕೈಗೊಳ್ಳಬೇಕಾಗಿರುವುದರಿಂದ ಸದರಿ ದಿನದಂದು ನೀರನ್ನು ಪಂಪು ಮಾಡಲು ಸಾಧ್ಯವಾಗುವುದಿಲ್ಲ ಮಂಡ್ಯ ನಗರದ ಸಾರ್ವಜನಿಕರಿಗೆ ಇಂದು ಮತ್ತು ನಾಳೆ ಮಾ.೧೩ ಮತ್ತು ೧೪ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿ ಇಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಮಂಡ್ಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.