ಮಂಗಳೂರು(ದಕ್ಷಿಣ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ಕಾರ್ಯಕರ್ತರು ಮಂಗಳೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಎಂಎಲ್ಸಿ ಐವನ್ ಡಿಸೋಜ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಬಿಜೆಪಿ ಸಂಸದನ ವಿರುದ್ಧ ಧಿಕ್ಕಾರ ಕೂಗಿದರು.
ಇದೇ ವೇಳೆ ಮಾತನಾಡಿದ ಐವನ್ ಡಿಸೋಜಾ, ಅನಂತ ಕುಮಾರ್ ಹೆಗಡೆ ಈ ರೀತಿಯ ಹೇಳಿಕೆ ಇದು ಮೊದಲು ನೀಡಿರುವುದಲ್ಲ. ಎರಡು ವರ್ಷಗಳ ಹಿಂದೆಯೂ ಇದೇ ರೀತಿ ಸಂವಿಧಾನ ಬದಲಾಯಿಸುತ್ತೇವೆಂದು ಹೇಳಿಕೆ ನೀಡಿದ್ದರು. ನಾಲ್ಕು ವರ್ಷ ಕಾಲ ಇವರು ಕ್ಷೇತ್ರದಲ್ಲಿ ಇದ್ದಾರೆಂದೇ ತಿಳಿದಿರಲಿಲ್ಲ. ಈಗ ದಿಢೀರ್ ಆಗಿ ಎಚ್ಚತ್ತುಕೊಂಡು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ, ಗೊಂದಲಕ್ಕೀಡು ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಸಂವಿಧಾನ ವಿರುದ್ಧ ಹೇಳಿಕೆ ನೀಡಿರುವುದು ಅಪರಾಧವಾಗಿದ್ದು ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ ಎಂದರು.