ಯಳಂದೂರು: ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ತಾಲೂಕಿನ ಕೃಷ್ಣಾಪುರ ದೇವರಾಜು ಆಯ್ಕೆಯಾಗಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್ ಅಧಿಕೃತವಾಗಿ ಆದೇಶದ ಪ್ರತಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಕೃಷ್ಣಾಪುರ ದೇವರಾಜು ಮಾತನಾಡಿ, ನನಗೆ ಕಾಂಗ್ರೆಸ್ ಪಕ್ಷ ನೀಡಿರುವ ಹೊಸ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಬಡವರ ಪರವಾದ ಇಂತಹ ಕಾರ್ಯಕ್ರಮದ ಸದಸ್ಯನಾಗಿ ನನ್ನನ್ನು ನಿಯುಕ್ತಿಗೊಳಿಸಿದ್ದಕ್ಕೆ ರಾಜ್ಯ ಸರ್ಕಾರ, ಸ್ಥಳೀಯ ಶಾಸಕರು, ಪಕ್ಷದ ಎಲ್ಲಾ ನಾಯಕರಿಗೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.