ಮಂಡ್ಯ : ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕೊನೆಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು, ೨೫ಕ್ಕೆ ತಾವೇ ಸ್ವತಃ ಬಂದು ಅಭ್ಯರ್ಥಿ ಘೋಷಣೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಮಾ. ೨೧ಕ್ಕೆ ನನಗೆ ಹೃದಯದ ಶಸ್ತ್ರ ಚಿಕಿತ್ಸೆ ಇದೆ. ಮಾ. ೨೫ ರಂದು ನಾನೇ ಬಂದು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ ಎಂದು ಹೇಳಿದರು. ಪಕ್ಷಕ್ಕಾಗಿ ನಿಸ್ವಾರ್ಥವಾಗಿ ದುಡಿಯುತ್ತಿರುವ ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ. ನಿಖಿಲ್ ಕುಮಾರಸ್ವಾಮಿಗೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಡುತ್ತೇನೆ ಎಂದರು.