ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಮಾ.೧೬ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಾ.೧೬ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ನಗರದ ಫ್ಯಾಕ್ಟರಿ ಸರ್ಕಲ್ ಹಾಗೂ ಸಂಜಯ್ ಸರ್ಕಲ್ ನಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ ಗುದ್ದಲಿ ಪೂಜೆ ಮತ್ತು ಎನ್. ಹೆಚ್ – ೨೭೫ ಶ್ರೀನಿವಾಸಪುರ ಗೇಟ್ ನಿಂದ ಇಂಡುವಾಳು ಅಂಡರ್ ಪಾಸ್ ವರೆಗೆ ಮಂಡ್ಯ ನಗರದ ಮಧ್ಯ ಭಾಗದಲ್ಲಿ ವಿಶ್ವ ದರ್ಜೆಯ ರಸ್ತೆ ಹಾಗೂ ಪಾದಾಚಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ ೧೧.೦೦ ಗಂಟೆಗೆ ಬಸರಾಳು ಗ್ರಾಮದಲ್ಲಿ ಕ.ರಾ. ರ.ಸಾ. ನಿಗಮದ ಬಸ್ ನಿಲ್ದಾಣ ನಿರ್ಮಿಸುವ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨.೦೦ ಗಂಟೆಗೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುವ ಬೇಬಿ ಬೆಟ್ಟದ ಭಾರೀ ದನಗಳ ಜಾತ್ರಾ ಮಹೋತ್ಸವ ಹಾಗೂ ಉಚಿತ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨.೩೦ ಗಂಟೆಗೆ ನಾಗಮಂಗಲ – ಬೆಳ್ಳೂರು ಕ್ರಾಸ್ – ಯಡಿಯೂರು – ಕುಣಿಗಲ್ – ನೆಲಮಂಗಲ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.