Tuesday, April 22, 2025
Google search engine

Homeರಾಜಕೀಯಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡಿದ ಪ್ರತಾಪ್​ ಸಿಂಹ

ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡಿದ ಪ್ರತಾಪ್​ ಸಿಂಹ

ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ ಸಿಂಹಗೆ ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ರಾಜವಂಶಸ್ಥ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ಟಿಕೆಟ್ ​ನಿಂದ ವಂಚಿತರಾದ ಪ್ರತಾಪ್ ಸಿಂಹ ಮಂಕಾಗಿದ್ದಾರೆ. ಸದ್ಯ ಪ್ರತಾಪ್ ಸಿಂಹ ಅವರು ಮಂಕು ತಿಮ್ಮನ ಕಗ್ಗ ಒಂದನ್ನು ಫೇಸ್‌ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಸಂಸದ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ. ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್​ ಸಿಂಹ ಪೋಸ್ಟ್ ಮಾಡಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್ ಇಂತಿದೆ

ಬ್ರಹ್ಮವಸ್ತುವು ಆನಂದಪಡುವುದಕ್ಕೋಸ್ಕರ ಪ್ರಕೃತಿಯ ಮೂಲಕವಾಗಿ ಆಟವನ್ನು ನಡೆಸುತ್ತಿದೆ. ತ್ರಿಗುಣಗಳ ವ್ಯತ್ಯಾಸದಿಂದ ಸೋಲು, ಗೆಲವು ಸ್ವಾಭಾವಿಕವೇ. ಈ ಲೀಲೆ ಸತತವಾಗಿ ಕೊನೆಯಿಲ್ಲದೆ ನಡೆಯುತ್ತಿರುವುದರಿಂದ ಇಲ್ಲಿ ಒಂದು ಸಲ ಸೋಲಾಗಬಹುದು, ಇನ್ನೊಂದು ಸಲ ಗೆಲುವಾಗಬಹುದು. ಆದದ್ದರಿಂದ ಈ ತತ್ತ್ವವನ್ನು ಮನದಟ್ಟು ಮಾಡಿಕೊಂಡು, ನನ್ನ ಜೀವನ ಕೆಟ್ಟಿತು, ನಾನು ಸಾಧಿಸಬೇಕಾದದ್ದನ್ನು ಸಾಧಿಸದೆಯೇ ಸಾಯುತ್ತಿದ್ದೇನೆ, ನಾನು ಸೋತೆ. ನನ್ನ ಒಳಸತ್ಯ ಬತ್ತಿಹೋಗಿದೆ, ನಾನು ಕೆಲಸಕ್ಕೆ ಬಾರದವನಾದೆ ಎಂದು-ನಿರಾಸೆಯ ಮನೋಭಾವವನ್ನು ತಳೆಯುವುದು ತಪ್ಪು ಎನ್ನುತ್ತಾರೆ ತಿಮ್ಮಗುರು.

ಮೃತ್ಯು ಎಂಬುದು ಒಂದು ಅಲೆಯಂತೆ, ಅಲೆ ಮೇಲೇಳುತ್ತದೆ ಮತ್ತೆ ಬೀಳುತ್ತದೆ, ಇನ್ನೊಂದು ಸಲ ಏಳುತ್ತದೆ. ಹೀಗೆ ನಮ್ಮ ಜೀವನ ಒಂದೇ ಜನ್ಮದಲ್ಲಿ ಮುಗಿದುಹೋಗುವುದಿಲ್ಲ. ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ.

RELATED ARTICLES
- Advertisment -
Google search engine

Most Popular