ದೇವಸ್ಥಾನಗಳ ಕ್ಯೂನಲ್ಲಿ ನಿಂತು ದೇವರ ದರ್ಶನ ಪಡೆದುಕೊಳ್ಳಲು ಕಷ್ಟ ಆಗಲಿದೆ. ಆದ್ದರಿಂದ ಅವರಿಗೆ ಪ್ರತ್ಯೇಕ ಕ್ಯೂ ಮಾಡಿ ನೇರ ಸಂದರ್ಶನಕ್ಕೆ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲು ತಿಳಿಸಿದ್ದೇನೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಮುಜರಾಯಿ ಇಲಾಖೆಗೆ ನೇರ ದೇವಸ್ಥಾಗಳಲ್ಲಿ ನೇರ ಸಂದರ್ಶನ ನೀಡುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ವಿಶೇಷ ಮನವಿಯನ್ನು ನೀಡಿದೆ. ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ ಒಕ್ಕೂಟದ ಸದಸ್ಯರು, ಮಜರಾಯಿ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಕರೀಕರಿಗೆ ನೇರ ದರ್ಶನ ನೀಡುವಂತೆ ಮನವಿ ಮಾಡಿದ್ದಾರೆ.
ಒಕ್ಕೂಟ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ಈಗಾಗಲೇ ಮುಜರಾಯಿ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಿದ್ದು, 65 ವರ್ಷಕ್ಕಿಂತ ಮೇಲ್ಪಟ್ಟ ಪುರುಷ ಹಾಗೂ ಮಹಿಳಾ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದೇನೆ ಎಂದು ಸಿಹಿ ಸುದ್ದಿ ನೀಡಿದ್ದಾರೆ.
ದೇವಸ್ಥಾನಗಳ ಕ್ಯೂನಲ್ಲಿ ನಿಂತು ದೇವರ ದರ್ಶನ ಪಡೆದುಕೊಳ್ಳಲು ಕಷ್ಟ ಆಗಲಿದೆ. ಆದ್ದರಿಂದ ಅವರಿಗೆ ಪ್ರತ್ಯೇಕ ಕ್ಯೂ ಮಾಡಿ ನೇರ ಸಂದರ್ಶನಕ್ಕೆ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲು ತಿಳಿಸಿದ್ದೇನೆ. ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಕೂಡ ಹೊರಡಿಸಲಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯನ್ನು ಸಮಪರ್ಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ. ದೇವಸ್ಥಾನ ಆವರಣ ಸ್ವಚ್ಛ ಇರುವಂತೆ ಸೂಚನೆ ನೀಡಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.
ಇನ್ನು, ದೇವಸ್ಥಾನ ಆವರಣದಲ್ಲಿ ಫೋನ್ ಬಳಕೆ ಮಾಡದಂತೆ ಆಯುಕ್ತರು ಈಗಾಗಲೇ ಆದೇಶ ನೀಡಿದ್ದಾರೆ. ಆದ್ದರಿಂದ ಭಕ್ತರಿಗೆ, ಪೂಜಾ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಗಳು ಆಗದಂತೆ ನಿರ್ದೇಶನ ನೀಡಿದ್ದೇನೆ. ಭಕ್ತರಿಗೆ ದೇವಸ್ಥಾನಕ್ಕೆ ಬಂದ ನಂತರ ನೆಮ್ಮದಿಯ ವಾತಾವರಣ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಕ್ಷಣದಿಂದಲೇ ಈ ವ್ಯವಸ್ಥೆ ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪರಿಣಾಮ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ನೇರವಾಗಿ ದೇವರ ದರ್ಶನ ಪಡೆದುಕೊಳ್ಳಬಹುದು.
ಮುಜರಾಯಿ ಇಲಾಖೆ ಅಡಿ ಸುಮಾರು 6 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳು ಪ್ರವರ್ಗ ಸಿಲ್ಲಿ ಬರುತ್ತವೆ. ಇಲ್ಲಿ ಭಕ್ತರಿಗೆ ಅಂತಹ ಸಮಸ್ಯೆಗಳು ಆಗುವುದಿಲ್ಲ. ಆದರೆ ಪ್ರವರ್ಗ ಎನಲ್ಲಿ 200ಕ್ಕೂ ಹೆಚ್ಚು ದೇವಸ್ಥಾನಗಳು ಬರಲಿದೆ. ಇಲ್ಲಿ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಸಮಸ್ಯೆ ಎದುರಾಗುತ್ತದೆ.