ಹುಬ್ಬಳ್ಳಿ: ಲೋಕಸಭೆ ಚುನಾವಣೆ ಟಿಕೆಟ್ ಸಿಗದಿದ್ದರಿಂದ ಕೆ.ಎಸ್.ಈಶ್ವರಪ್ಪರಿಗೆ ಬೇಸರ ಆಗಿರಬಹುದು. ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪರ ಜತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು.
ಟಿಕೇಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ, ಪಕ್ಷದ ಹೈಕಮಾಂಡ್ ಅದೆಲ್ಲವನ್ನು ಸರಿಪಡಿಸುತ್ತದೆ ಎಂದು ಹೇಳಿದರು.